HomeKarnatakaBIG NEWS: ಅಡ್ಡಮತದಾನ ಮಾಡಿದವರನ್ನು ಪತ್ತೆ ಮಾಡಿ ಈ ಜನ್ಮದಲ್ಲಿ ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮಾಡುತ್ತೇನೆ:...

BIG NEWS: ಅಡ್ಡಮತದಾನ ಮಾಡಿದವರನ್ನು ಪತ್ತೆ ಮಾಡಿ ಈ ಜನ್ಮದಲ್ಲಿ ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಮಾಡುತ್ತೇನೆ: ಆರ್.ಅಶೋಕ್ ಕೆಂಡಾಮಂಡಲ

ಬೆಂಗಳೂರು: ವಿಧಾನಪರಿಷತ್​​​ ಚುನಾವಣೆಯಲ್ಲಿ ಮೈತ್ರಿಪಕ್ಷಗಳಾದ ಜೆಡಿಎಸ್ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡಮತದಾನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಅಡ್ಡಮತದಾನ ಮಾಡಿದ ಶಾಸಕರು ಯಾರು ಎಂಬುದನ್ನು ಪತ್ತೆ ಹಚ್ಚಲು ಬಿಜೆಪಿ ಈಗಾಗಲೇ ಸತ್ಯಶೋಧಾನ ಸಮಿತಿ ರಚನೆ ಮಾಡಿದೆ. ಈ ನಡುವೆ ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಸಿ ಬಳಿಕ ಶ್ರೀಮಂಜುನಾಥ ಸ್ವಾಮಿ ಮುಂದೆ ಆಣೆ-ಪ್ರಮಾಣ ಮಡಿಸಲು ಮುಂದಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಅಡ್ಡಮತದಾನ ಮಾಡಿದವರನ್ನು ಸುಮ್ಮನೇ ಬಿಡುವುದಿಲ್ಲ ಎಂದಿದ್ದಾರೆ. 11 ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಅವರು ಯಾರು ಎಂಬುದನ್ನು ಪತ್ತೆ ಹಚ್ಚುವುದೇ ಒಂದು ಸವಾಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾರನ್ನೇ ಕೇಳಿದರೂ ನಾವು-ಆಣೆ- ಪ್ರಮಾಣ ಮಾಡುತ್ತೇವೆ ಎನ್ನುತ್ತಿದ್ದಾರೆ. ಅದೇ ನಮಗೂ ಆಶ್ಚರ್ಯವೆನಿಸಿದೆ. ಹಾಗಾಗಿ ಧರ್ಮಸ್ಥಳದಲ್ಲಿ ಪಕ್ಷದ ವೇದಿಕೆಯಲ್ಲಿಯೇ ಅಡ್ಡಮತದಾನ ಮಾಡಿದವರು ಯಾರೆಂಬುದನ್ನು ಪತ್ತೆ ಹಚ್ಚುತ್ತೇವೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸರಿಯಾಗಿ ಬುದ್ಧಿ ಕಲಿಸುತ್ತೇವೆ ಎಂದರು.

ಮೊದಲು ಅಡ್ಡಮತದಾನ ಮಾಡಿದವರು ಯಾರೆಂಬುದು ಪತ್ತೆಯಾಗಬೇಕು. ಪತ್ತೆಯಾದ ಬಳಿಕ ಕೇಂದ್ರದ ನಾಯಕರೊಂದಿಗೆ ಚರ್ಚಿಸುತ್ತೇವೆ. ಅವರಿಗೆ ಸರಿಯಾಗಿ ಪಾಠ ಕಲಿಸುತ್ತೇವೆ. ಯಾರೂ ಯಾವತ್ತೂ ಇಂತಹ ತಪ್ಪು ಮಾಡಬಾರದು. ಅವರು ಈ ಜನ್ಮದಲ್ಲಿ ಚುನಾವನೆಯಲ್ಲಿ ನಿಲ್ಲಬಾರದು ಹಾಗೆ ಮಾಡುತ್ತೇನೆ ಎಂದು ಗುಡುಗಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular