HomeCrimeShocking Video: 2 ನೇ ತರಗತಿ ವಿದ್ಯಾರ್ಥಿನಿಗೆ ಅಮಾನುಷ ರೀತಿಯಲ್ಲಿ ಥಳಿಸಿದ ಶಿಕ್ಷಕ

Shocking Video: 2 ನೇ ತರಗತಿ ವಿದ್ಯಾರ್ಥಿನಿಗೆ ಅಮಾನುಷ ರೀತಿಯಲ್ಲಿ ಥಳಿಸಿದ ಶಿಕ್ಷಕ

ಉತ್ತರ ಪ್ರದೇಶದ ಕನೌಜ್‌ನಲ್ಲಿ ಕೋಚಿಂಗ್ ಶಿಕ್ಷಕನೊಬ್ಬ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪುಟ್ಟ ಬಾಲಕಿಯನ್ನು ಅಮಾನುಷವಾಗಿ ಥಳಿಸಿದ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, 2ನೇ ತರಗತಿಯ ಬಾಲಕಿಗೆ ಇತರ ವಿದ್ಯಾರ್ಥಿಗಳ ಮುಂದೆ ಕೂದಲು ಎಳೆದು ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ಘಟನೆಯನ್ನು ಸ್ಥಳದಲ್ಲಿದ್ದವರೊಬ್ಬರು ತಮ್ಮ ಮೊಬೈಲ್‌ ನಲ್ಲಿ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಇದೀಗ ಆರೋಪಿ ಶಿಕ್ಷಕನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಕನಿಂದ ತಪ್ಪಿಸಿಕೊಳ್ಳಲು ಕುರ್ಚಿಗಳ ಹಿಂದೆ ಹೋಗಲು ಪ್ರಯತ್ನಿಸುತ್ತಿರುವಾಗ ಅವಳ ಕೂದಲು ಹಿಡಿದು ಎಳೆದುಕೊಂಡು ಬಂದು ಹೊಡೆಯುತ್ತಾನೆ. ಮಗು ನೋವಿನಿಂದ ಅಳುತ್ತಿದ್ದರೂ ಶಿಕ್ಷಕ ಮಗುವಿಗೆ ಥಳಿಸುತ್ತಲೇ ಇದ್ದ.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಮಗುವಿಗೆ ಥಳಿಸಿದ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular