HomeKarnatakaಕ್ರಿಪ್ಟೋ ಕರೆನ್ಸಿ ಹಗರಣ: ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇಲ್ ವಾಲ್ ಗೆ ಜಾಮೀನು ಮಂಜೂರು

ಕ್ರಿಪ್ಟೋ ಕರೆನ್ಸಿ ಹಗರಣ: ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇಲ್ ವಾಲ್ ಗೆ ಜಾಮೀನು ಮಂಜೂರು

ಬೆಂಗಳೂರು: ಕ್ರಿಪ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮತ್ತು ಆತನ ಅಕೌಂಟೆಂಟ್ ರಾಬಿನ್ ಖಂಡೇಲ್‌ವಾಲ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕ್ರಿಪ್ಟೋ ಕರೆನ್ಸಿ ಹಗರಣದ ಪ್ರಕರಣದ ದಾಖಲೆಗಳು 8,103 ಪುಟಗಳಷ್ಟಿದ್ದು, 10 ಸಾಕ್ಷಿಗಳನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ವಿಚಾರಣೆ ಶೀಘ್ರದಲ್ಲೇ ಪೂರ್ಣಗೊಂಡು ಪ್ರಕರಣ ಇತ್ಯರ್ಥವಾಗುವ ಸಾಧ್ಯತೆ ತೀರಾ ಕಡಿಮೆ ಎಂದು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಎಂಎಲ್‌ಎ ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ಆರೋಪ ಎದುರಿಸುತ್ತಿರುವ ಇಬ್ಬರು ಆರೋಪಿಗಳು ನಿಯಮಿತ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿ ನ್ಯಾಯಾಲಯ ಈ ಆದೇಶ ನೀಡಿದೆ.

ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಆರೋಪಿಗಳು ಪತ್ತೆಯಾಗದ ಅಪರಾಧದ ಹಣವನ್ನು ಬೇರೆಡೆಗೆ ವರ್ಗಾಯಿಸಬಹುದು ಅಥವಾ ದುರುಪಯೋಗಪಡಿಸಿಕೊಳ್ಳಬಹುದು ಎಂಬ ಇಡಿ ಪರ ವಾದವನ್ನು ಹೈಕೋರ್ಟ್ ಒಪ್ಪಲಿಲ್ಲ. ಪ್ರಸ್ತುತ ಪ್ರಕರಣ 2021ರಲ್ಲಿ ದಾಖಲಾಗಿದ್ದು, ಅರ್ಜಿದಾರರನ್ನು 2026ರ ಮೇ 8ರಂದು ಬಂಧಿಸಲಾಗಿದೆ. ಅರ್ಜಿದಾರರು ಅಥವಾ ಇತರ ಆರೋಪಿಗಳು ಅಪರಾಧದಿಂದ ಬಂದ ಹಣವನ್ನು ಸುರಕ್ಷಿತವಾಗಿ ಇರಿಸಿದ್ದರೆ ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳುವ ಅಥವಾ ಬೇರೆಡೆಗೆ ವರ್ಗಾಯಿಸುವ ಉದ್ದೇಶ ಹೊಂದಿದ್ದರೆ, ಬಂಧನಕ್ಕೂ ಮುನ್ನವೇ ಅದನ್ನು ಮಾಡಬಹುದಿತ್ತು ಎಂದು ನ್ಯಾಯಾಲಯ ಹೇಳಿದೆ.

ಇದಲ್ಲದೆ, ಮೂಲ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾಗ ಅರ್ಜಿದಾರರು ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪವೂ ಇಲ್ಲ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

2021ರಲ್ಲಿ ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಅರ್ಜಿದಾರರ ವಿರುದ್ಧ ದಾಖಲಿಸಿದ್ದ ಜಾರಿ ಪ್ರಕರಣದ ಮಾಹಿತಿ ವರದಿ (ಇಸಿಐಆರ್) ಈ ಪ್ರಕರಣಕ್ಕೆ ಸಂಬಂಧಿಸಿದೆ. 2017ರಿಂದ 2020ರ ಅವಧಿಯಲ್ಲಿ ಅರ್ಜಿದಾರರ ವಿರುದ್ಧ ಮೂಲ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿದ್ದವು. ಆ ಎಲ್ಲ ಪ್ರಕರಣಗಳಲ್ಲೂ ಅವರು ಜಾಮೀನು ಪಡೆದಿದ್ದರು. 2020ರಲ್ಲಿ ಮತ್ತೊಂದು ಇಸಿಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಅರ್ಜಿದಾರರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು ಮತ್ತು ನಂತರ ಅವರಿಗೆ ನಿಯಮಿತ ಜಾಮೀನು ದೊರೆತಿತ್ತು. ಆದರೆ, 2021ರಲ್ಲಿ ದಾಖಲಾದ ಪ್ರಸ್ತುತ ಇಸಿಐಆರ್ ಪ್ರಕರಣದಲ್ಲಿ 2026ರ ಮೇ 8ರಂದು ಅವರನ್ನು ಬಂಧಿಸಲಾಗಿತ್ತು. ವಿಶೇಷ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಇಬ್ಬರೂ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.

ಮಗುವಿಗೆ ನಾಮಕರಣ ಹಿನ್ನೆಲೆ: ಕೆಪಿ ಎಸ್ ಸಿ ಹಗರಣದ ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಗೆ ಜಾಮೀನು ಮಂಜೂರು

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಶುವೈದ್ಯಾಧಿಕಾರಿಗಳ ಹುದ್ದೆ ನೇಮಕಾತಿ ಅಕ್ರಮದ ಕಿಂಗ್‌ಪಿನ್‌ ಬಸವರಾಜ್‌ ಕನ್ನಾಳೆಗೆ ಹೈಕೋರ್ಟ್ಬ್ ಷರತ್ತುಬದ್ಧ ಜಾಅಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಮಗುವಿನ ನಾಮಕರಣ ಹಿನ್ನೆಲೆಯಲ್ಲಿ ಐದು ದಿನಗಳ ವರೆಗೆ ಜಾಮೀನು ನೀಡಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಮಗುವಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಸವರಾಜ್ ಕನ್ನಾಳೆಗೆ ಅಕ್ಟೋಬರ್ 15 ರಿಂದ 20 ರವರೆಗೆ ಬೀದರ್​​ಗೆ ತೆರಳಲು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಬಸವರಾಜ್ ಕನ್ನಾಳೆ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಕನ್ನಾಳೆ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ. 12 ದಿನದ ಮಗುವಿಗೆ ನಾಮಕರಣ ಶಾಸ್ತ್ರ ಮಾಡಬೇಕಿದೆ. ಹೀಗಾಗಿ ಮಾನವೀಯತೆ ಮೇಲೆ ಒಂದು ವಾರದ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಇತ್ತ ಸರ್ಕಾರದ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ಪ್ರತಿವಾದ ಮಂಡಿಸಿದ್ದು, ಕನ್ನಾಳೆ ಹಲವು ಅಭ್ಯರ್ಥಿಗಳಿಂದ ಹಣ ಸಂಗ್ರಹಿಸಿದ್ದಾನೆ. ಸಿಐಡಿ ಕಸ್ಟಡಿಯಲ್ಲಿಯೇ ಬೀದರ್‌ಗೆ ತೆರಳಲು ಷರತ್ತು ವಿಧಿಸಬೇಕು ಎಂದಿದ್ದಾರೆ.

ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಹೈಕೋರ್ಟ್ ಪೀಠ, ಅ.15ರಿಂದ ಅ.20ರವರೆಗೆ ಬಸವರಾಜ ಕನ್ನಾಳೆಗೆ ಷರತ್ತಿನ ಅನ್ವಯ ಮಧ್ಯಂತರ ಜಾಮೀನು ನೀಡಿದ್ದು, ಪೊಲೀಸರೇ ಎಸ್ಕಾರ್ಟ್‌ನಲ್ಲಿ ಕರೆದೊಯ್ದು ಕರೆತರಲು ಸೂಚನೆ ನೀಡಿದೆ.

2024ರಲ್ಲಿ ಪಶು ವೈದ್ಯಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಭ್ಯರ್ಥಿಗಳೊಂದಿಗೆ ಡೀಲ್‌ ಕುದುರಿಸುವಲ್ಲಿ ಕನ್ನಾಳೆ ಯಶಸ್ವಿಯಾಗಿದ್ದ. ಪ್ರತಿ ಹುದ್ದೆಯನ್ನು ಸುಮಾರು 80 ಲಕ್ಷ ರೂ.ಗಳಿಗೆ ಮಾರಾಟ ಮಾಡುವ ಯೋಜನೆ ರೂಪಿಸಿದ್ದ. ಈ ಪೈಕಿ ಸುಮಾರು 15ಕ್ಕೂ ಹೆಚ್ಚು ಅಭ್ಯರ್ಥಿಗಳಿಂದ ಮುಂಗಡವಾಗಿ 1.50 ಕೋಟಿ ರೂ. ಸಂಗ್ರಹಿಸಲಾಗಿತ್ತು. ಇದೇ ಮೊತ್ತದಲ್ಲಿ ಕನ್ನಾಳೆಯು ಐಎ ಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಗಂಗ್ವಾರ್‌ಗೆ 1.30 ಕೋಟಿ ರೂ. ನಗದು ತಲುಪಿಸಿದ್ದ. ಈ ಹಣದ ಪೈಕಿ ಓಂ ಶ್ರೀ ಲಕ್ಷ್ಮೀ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್‌ಗೆ 80 ಲಕ್ಷ ರೂ. ಜಮೆ ಆಗಿತ್ತು. ಅಷ್ಟೇ ಅಲ್ಲದೆ, ಐಎಎಸ್‌ ಅಧಿಕಾರಿ ಗಂಗ್ವಾರ್‌ ಸಂಬಂಧಿಕರಿಗೂ ಅಕ್ರಮ ಹಣ ತಲುಪಿದೆ. ಪ್ರಮುಖವಾಗಿ ಗಂಗ್ವಾರ್‌ ಸಹೋದರನ ಖಾತೆಗೆ 10.94 ಲಕ್ಷ ರೂ. ಹಾಗೂ ಅತ್ತಿಗೆಯ ಖಾತೆಗೆ 15.39 ಲಕ್ಷ ರೂ. ಜಮೆ ಮಾಡಲಾಗಿತ್ತು ಎಂದು ಇಡಿ ತನಿಖಾ ಮೂಲಗಳು ತಿಳಿಸಿವೆ.

ಇನ್ನು ಈ ಬಗ್ಗೆ ಇಡಿ ಅಧಿಕಾರಿಗಳ ತನಿಖೆ ಮುಂದುವರೆದಿದೆ. ಈ ನಡುವೆ ಕೆಎಸ್​​ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಗೀತಾಳನ್ನು ಸಹ ಇಡಿ ಅಧಿಕಾರಿಗಳು ಬಂಧಿಸಿ ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular