HomeKarnatakaಸುಪ್ರೀಂ ಕೋರ್ಟ್ 'ಸಮಾಧಾನ್ ಸಮಾರೋಹ್' ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳಿಗೆ ಸಿಎಸ್ ಡಾ. ಶಾಲಿನಿ ರಜನೀಶ್ ಸೂಚನೆ

ಸುಪ್ರೀಂ ಕೋರ್ಟ್ ‘ಸಮಾಧಾನ್ ಸಮಾರೋಹ್’ ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳಿಗೆ ಸಿಎಸ್ ಡಾ. ಶಾಲಿನಿ ರಜನೀಶ್ ಸೂಚನೆ

ಬೆಂಗಳೂರು: ಸರ್ವೋಚ್ಛ ನ್ಯಾಯಾಲಯವು ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್'(ಲೋಕ್ ಅದಾಲತ್) ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ರಾಜ್ಯದ ಎಲ್ಲಾ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್‍ಎಲ್‍ಎಸ್‍ಎ) ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ, ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳಿಗೆ ಸೂಚಿಸಿರುತ್ತಾರೆ.

ಎಲ್ಲಾ ಇಲಾಖೆಯ ಮುಖ್ಯಸ್ಥರು, ತಮ್ಮ ಇಲಾಖೆಗಳಲ್ಲಿ ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಉಚಿತ ಲೋಕ್ ಅದಾಲತ್ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವಂತೆ ತಿಳಿಸಿದ್ದಾರೆ. ಅಲ್ಲದೇ, ಈ ಕುರಿತು ಕೈಗೊಂಡ ಕ್ರಮಗಳ ವರದಿಯನ್ನು 3 ದಿನಗಳ ಒಳಗಾಗಿ ನೇರವಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸಿ, ಅದರ ಪ್ರತಿಯನ್ನು ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಕಳುಹಿಸಿಕೊಡಬೇಕೆಂದು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂದಾಯ ಇಲಾಖೆ, ಕೆ.ಜಿ.ಐ.ಡಿ, ವಿಮಾ ಕಂಪನಿಗಳು, ಪೊಲೀಸ್ ಇಲಾಖೆ, ಖಾಸಗಿ ಕಾರ್ಪೊರೇಷನ್‍ಗಳು ಹಾಗೂ ವಿವಿಧ ಸರ್ಕಾರಿ ಕಚೇರಿಗಳು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

ಈ ಎಲ್ಲಾ ಇಲಾಖೆಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಗಳೊಂದಿಗೆ ಸಮನ್ವಯ ಸಾಧಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು.

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಇಲಾಖಾ ಮುಖ್ಯಸ್ಥರು ಈ ವಿಷಯದಲ್ಲಿ ವೈಯಕ್ತಿಕ ಗಮನ ಹರಿಸಬೇಕೆಂದು ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular