ವಿವಿಧ ವಿಚಾರಗಳಲ್ಲಿ ಕರ್ನಾಟಕದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶೀಘ್ರವೇ ಗುಡ್‌ನ್ಯೂಸ್ ಸಿಗಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗ ಈ ಕುರಿತು ಮಾತುಕತೆ ನಡೆಸಿದೆ.
ಸಿ.ಎಸ್.ಷಡಾಕ್ಷರಿ, ಪ್ರಧಾನ ಕಾರ್ಯದರ್ಶಿ ಹೆಚ್. ಗಿರಿಗೌಡ, ಗೌರವಾಧ್ಯಕ್ಷ ಎಸ್. ಬಸವರಾಜು, ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿಯಾಗಿ ಹಲವು ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
ಯಾವ-ಯಾವ ವಿಚಾರಗಳು?
* ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ
* ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ
* ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಸೇರಿದಂತೆ ಜಿಪಿಟಿ, ಪ್ರೌಢಶಾಲಾ ಶಿಕ್ಷಕರ ಮುಂಬಡ್ತಿ ಪ್ರಕ್ರಿಯೆ ಆರಂಭಿಸುವ ಕುರಿತು
* ದೈಹಿಕ ಶಿಕ್ಷಣ ಶಿಕ್ಷಕರ ಮುಂಬಡ್ತಿ ಕುರಿತು
* ಸಮಗ್ರ ಶಿಕ್ಷಣ ಇಲಾಖೆಯಡಿಯಲ್ಲಿ ವೇತನ ಪಡೆಯುವ ಶಿಕ್ಷಕರಿಗೆ ಸಾಮಾನ್ಯ ವೇತನ ಶೀರ್ಷಿಕೆಯಡಿಯಲ್ಲಿ ವೇತನ ಪಾವತಿ ಕುರಿತು
* ಅತಿಥಿ ಶಿಕ್ಷಕರ ವೇತನ ಬಿಡುಗಡೆಗೊಳಿಸುವ ಬಗ್ಗೆ
* ಶಾಲಾ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಸಿವಿಲ್ ಕಾಮಗಾರಿಗಳ ಬಗ್ಗೆ
* ಇನ್ನಿತರೆ ಇಲಾಖಾ ಸಂಬಂಧ ವಿಚಾರಗಳನ್ನು ಸವಿಸ್ತಾರವಾಗಿ ಚರ್ಚೆ ಮಾಡಿದರು
ಎಲ್ಲಾ ಮನವಿಗಳಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ಕರಡು ನಿಮಯಗಳು ಈಗಾಗಲೇ ಸಿದ್ದಗೊಂಡಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಿ ಅಂತಿಮ ನಿಯಮಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲಾಗುತ್ತದೆ ಎಂದರು.

