HomeKarnatakaಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಮೇಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಲ್ಲೆ

ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಮೇಲೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಲ್ಲೆ

ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಖಾಸಗಿ ವಾಹಿನಿ ಕ್ಯಾಮೆರಾ ಮ್ಯಾನ್ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ್ದಾರೆ.

ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಿದ್ದು, ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಚಿತ್ರೀಕರಿಸಲು ಹೋಗಿದ್ದ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ರೀಡಾಪಟುಗಳಿಗೆ ಟ್ರ್ಯಾಕ್ ಸೂಟ್, ಟೀಶರ್ಟ್ ವಿತರಣೆಯಲ್ಲಿ ಅವ್ಯವಸ್ಥೆ ಕಂಡು ಬಂದಿದೆ ಎಂಬ ಆರೋಪ ಕೇಳಿ ಬಂದಿದೆ. ಮೊದಲೇ ನೊಂದಣಿ ಮಾಡಿಸಿಕೊಂಡಿದ್ದರೂ ಟ್ರ್ಯಾಕ್ ಸೂಟ್ ಟೀ ಶರ್ಟ್ ಕೊಡದ ಹಿನ್ನೆಲೆಯಲ್ಲಿ ಕ್ರೀಡಾಕೂಟಕ್ಕೆ ಬಂದಿದ್ದ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಚಿತ್ರಿಕರಿಸುವ ವೇಳೆ ಮಾಧ್ಯಮದವರ ಮೇಲೆ ಹರಿಹಾಯ್ದ ಷಡಕ್ಷರಿ ಸುದ್ದಿ ಮಾಡದಂತೆ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕ್ಯಾಮರಾ ಮ್ಯಾನ್ ಮೇಲಿನ ಹಲ್ಲೆ ಖಂಡಿಸಿ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular