HomeIndiaBREAKING: CSK ತಂಡಕ್ಕೆ ಮರಳಿದ ಎಂ.ಎಸ್. ಧೋನಿ: ಅಭಿಮಾನಿಗಳ ಕುತೂಹಲಕ್ಕೆ ತೆರೆ

BREAKING: CSK ತಂಡಕ್ಕೆ ಮರಳಿದ ಎಂ.ಎಸ್. ಧೋನಿ: ಅಭಿಮಾನಿಗಳ ಕುತೂಹಲಕ್ಕೆ ತೆರೆ

ನವದೆಹಲಿ: ಲೆಜೆಂಡರಿ ಚೆನ್ನೈ ಸೂಪರ್ ಕಿಂಗ್ಸ್(CSK) ವಿಕೆಟ್‌ಕೀಪರ್, ಬ್ಯಾಟರ್ ಎಂ.ಎಸ್. ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನ 18 ನೇ ಸೀಸನ್‌ಗೆ ಮರಳಲಿದ್ದಾರೆ ಎಂದು ಸಿಎಸ್‌ಕೆ ದೃಢಪಡಿಸಿದೆ.

2024ರಲ್ಲಿ ಧೋನಿ ಆಡುತ್ತಾರೆಯೇ, ಇಲ್ಲವೇ ಎಂದು ಅಭಿಮಾನಿಗಳಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದು, ಇದೀಗ ಸ್ಪಷ್ಟನೆ ಸಿಕ್ಕಂತಾಗಿದೆ. ಅಭಿಮಾನಿಗಳ ಪ್ರೀತಿಯ ತಲೈವ ಧೋನಿ ಇನ್ನೂ ಒಂದು ಋತುವಿಗಾಗಿ ಆಡಲು ಹಿಂತಿರುಗಿರುವುದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ತಮ್ಮ ಅಭಿಮಾನಿಗಳನ್ನು ಆಕರ್ಷಿಸಲು ಧೋನಿ ಮರಳಿದ್ದಾರೆ.

ಕೆಲ ಋತು ಹೊರತಾಗಿ ಪಂದ್ಯಾವಳಿಯ ಆರಂಭದಿಂದಲೂ ಧೋನಿ CSK ಗಾಗಿ ಆಡುತ್ತಿದ್ದಾರೆ. CSK 2010, 2011, 2018, 2021 ಮತ್ತು 2023 ರಲ್ಲಿ ಐದು ಐಪಿಎಲ್ ಪ್ರಶಸ್ತಿಗಳನ್ನು ಗಳಿಸುವಲ್ಲಿ ಪ್ರಮುಖ ಪಾತ್ರ ಅವರದ್ದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular