HomeKarnatakaಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಸಿ.ಟಿ. ರವಿ ಅಚ್ಚರಿ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಸಿ.ಟಿ. ರವಿ ಅಚ್ಚರಿ ಹೇಳಿಕೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ. ರವಿ ಅವರನ್ನು ಕೈ ಬಿಡಲಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಸಿ.ಟಿ. ರವಿ ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಲ್ಲ ಎಂದು ಹೇಳಿದ್ದಾರೆ.

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಲ್ಲ, ರಾಜ್ಯಾಧ್ಯಕ್ಷ ಅನ್ನುವುದು ಜವಾಬ್ದಾರಿಯುತ ಸ್ಥಾನ. ಹುದ್ದೆಯನ್ನು ಕೇಳಿ ಪಡೆಯುವಂತಹುದಲ್ಲ. ಇದರ ಬಗ್ಗೆ ಪಕ್ಷ ನಿರ್ಧರಿಸುತ್ತದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಪಕ್ಷದ ಯಾವುದೇ ಹುದ್ದೆ, ಅಧಿಕಾರ ಶಾಶ್ವತ ಅಲ್ಲ. ನಾನೀಗ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಪಕ್ಷದ ಕಾರ್ಯಕರ್ತನಾಗಿ ನನ್ನ ಕೆಲಸ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular