ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ: ಸಿ.ಟಿ. ರವಿ

ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿಯೇ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಕಾರವಾರದಲ್ಲಿ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಭೆಗಳಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದನ್ನು ಸ್ಪಷ್ಟಪಡಿಸಿದ್ದಾರೆ. ಕೆಲವು ರಾಜಕೀಯ ಪಕ್ಷದ ನಾಯಕರು ಗೊಂದಲ ಮೂಡಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಸಿಎಂ ನೇತೃತ್ವದಲ್ಲೇ ಚುನಾವಣೆ ನಡೆಸುತ್ತೇವೆ. ಕಾಂಗ್ರೆಸ್ ನವರು ಡಿಎನ್ಎ ಮೂಲಕ ನಾಯಕತ್ವ ಬರುತ್ತದೆ ಎಂದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read