HomeKarnatakaಬಿಜೆಪಿಯಿಂದ ಮಾಡಾಳ್ ವಿರೂಪಾಕ್ಷಪ್ಪ ಉಚ್ಚಾಟನೆ ಮಾಡಿಲ್ಲ: ಡಿಕೆಶಿ ಉದಾಹರಣೆ ನೀಡಿ ಮಾಡಾಳ್ ಗೆ ಸಿ.ಟಿ. ರವಿ...

ಬಿಜೆಪಿಯಿಂದ ಮಾಡಾಳ್ ವಿರೂಪಾಕ್ಷಪ್ಪ ಉಚ್ಚಾಟನೆ ಮಾಡಿಲ್ಲ: ಡಿಕೆಶಿ ಉದಾಹರಣೆ ನೀಡಿ ಮಾಡಾಳ್ ಗೆ ಸಿ.ಟಿ. ರವಿ ಟಾಂಗ್

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿಲ್ಲ. ಪಕ್ಷದಲ್ಲಿ ಪ್ರಾಥಮಿಕ ತನಿಖಾ ವರದಿ ಬರುವವರೆಗೂ ಉಚ್ಚಾಟನೆ ಮಾಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಾಥಮಿಕ ತನಿಖಾ ವರದಿ ಬಂದ ನಂತರ ಪಕ್ಷ ಕ್ರಮ ಕೈಗೊಳ್ಳುತ್ತದೆ. ಅವರನ್ನು ಉಚ್ಚಾಟನೆ ಮಾಡಿದ್ದಾರೆ ಎಂಬುದು ಇದುವರೆಗೆ ನನ್ನ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾಮೀನು ದೊರೆತ ನಂತರ ಮಾಡಾಳು ವಿರೂಪಾಕ್ಷಪ್ಪ ಮೆರವಣಿಗೆ ನಡೆಸಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿ.ಟಿ. ರವಿ, ಹಿಂದೆ ಡಿ.ಕೆ. ಶಿವಕುಮಾರ್ ದೆಹಲಿಯಿಂದ ಬಂದಾಗ ಮೆರವಣಿಗೆ ಮಾಡಿದ್ದು ಮಾದರಿ ಇರಬೇಕು. ಡಿ.ಕೆ. ಶಿವಕುಮಾರ್ ಮೆರವಣಿಗೆ ಅವರಿಗೆ ಮಾದರಿಯಾಗಿ ಅನುಸರಿಸಿರಬೇಕು. ವಿರೂಪಾಕ್ಷಪ್ಪ ಬಿಜೆಪಿ ನಾಯಕರ ನಿಲುವನ್ನು ಅನುಸರಿಸಿದರೆ ಸಾಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular