HomeKarnatakaಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಕೇಸ್: ಸಿಎಂ ಪುತ್ರ ಯತೀಂದ್ರಗೆ...

ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಕೇಸ್: ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗಲು ಸಿಎಂ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರಿಗೆ ಸಿಐಡಿ ನೋಟಿಸ್ ನೀಡಿದೆ.

ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸಿಐಡಿ ಡಿವೈಎಸ್ಪಿ ನೋಟಿಸ್ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಶ್ರೀನಿವಾಸ್ ಅವರಿಗೂ ನೋಟಿಸ್ ನೀಡಲಾಗಿದೆ. ಕಲಬುರ್ಗಿ ಮೂಲದ ಸದಸ್ಯ ಬೇಗಂ ಅವರಿಗೂ ನೋಟಿಸ್ ನೀಡಲಾಗಿದೆ.

ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿರುವ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿಚಾರಣೆಗೆ ಹಾಜರಾಗಲಿದ್ದಾರೆ, ಉಮಾಶ್ರೀ, ನಾಗರಾಜ್ ಯಾದವ್ ಸೇರಿದಂತೆ ಮೂವರು ವಿಧಾನಪರಿಷತ್ ಸದಸ್ಯರಿಂದ ಹೇಳಿಕೆ ದಾಖಲಿಸಿದ್ದು, ಇಂದು ಮೂವರು ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೂಲಕ ಸಿ.ಟಿ. ರವಿಗೆ ಸಿಐಡಿ ನೋಟಿಸ್ ಕಳುಹಿಸಿ ತನಿಖೆಗೆ ಸಹಕರಿಸುವಂತೆ ಕೋರಿದೆ. ಸಿ.ಟಿ. ರವಿ ಇಂದು ನೋಟಿಸ್ ಸಂಬಂಧ ಬೆಂಗಳೂರಿನ 42ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular