BIG NEWS: ಸಿ.ಟಿ. ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಬಿಜೆಪಿ ಕರೆ ನೀಡಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಶುಕ್ರವಾರ ಬಂದ್ ಕರೆ ನೀಡಲಾಗಿದೆ. ಜಿಲ್ಲಾ ಬಿಜೆಪಿ ಮುಖಂಡರು ಸಿ.ಟಿ. ರವಿ ಬಂಧನ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿಕ್ಕಮಗಳೂರು ಬಂದ್ ಗೆ ಕರೆ ನೀಡಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಧುರಾಜ್ ಅರಸ್ ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read