HomeKarnatakaಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡುತ್ತೇವೆ: ಸಿ.ಟಿ. ರವಿ

ಯಾರೇ ಅಭ್ಯರ್ಥಿಯಾದರೂ ಕೆಲಸ ಮಾಡುತ್ತೇವೆ: ಸಿ.ಟಿ. ರವಿ

ಚಿಕ್ಕಮಗಳೂರು: ಯಾರೇ ಅಭ್ಯರ್ಥಿಯಾದರೂ ನಾವು ಕೆಲಸ ಮಾಡುತ್ತೇವೆ. ನಮ್ಮ ವೈಮನಸ್ಸು ಇಡೀ ದೇಶಕ್ಕೆ ಆಪತ್ತನ್ನು ತರಬಾರದು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತಾಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ಭಾವನೆ ತಿಳಿಸಲು ಬೇರೆ ಬೇರೆ ಆಯ್ಕೆಗಳು ಇವೆ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್ ವಿಚಾರವಾಗಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿರುವುದಕ್ಕೆ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ ಸಿ.ಟಿ. ರವಿ, ರಾಷ್ಟ್ರದ ಹಿತ ಗಮನದಲ್ಲಿಟ್ಟುಕೊಂಡು ರಾಜಕಾರಣ ಮಾಡಬೇಕು. ನಮ್ಮ ವೈಮನಸ್ಸು ಕಾಂಗ್ರೆಸ್ ಪಕ್ಷಕ್ಕೆ ಲಾಭ ಆಗಬಾರದು. ನನ್ನ ಗ್ರಹಚಾರ ಸರಿ ಇರಲಿಲ್ಲ ಎಂದು ವಿಧಾನಸಭೆ ಸೋಲು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷ ವಿರೋಧಿ ಕೆಲಸ ಮಾಡಿದವರು ಅನುಭವಿಸುತ್ತಾರೆ ಅವರವರ ಕರ್ಮಗಳನ್ನು ಅವರ ಅನುಭವಿಸುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular