ಬೆಂಗಳೂರು : ಕೇಂದ್ರ ಸರ್ಕಾರ(Central Government) ವು ಬಡವರಿಗೆ ನೀಡುವ ಉಚಿತ ಅಕ್ಕಿ ಯೋಜನೆ(Free Rice Scheme) ಯಲ್ಲಿ ರಾಜಕೀಯ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ (CM Siddaramaiah) ಆರೋಪಕ್ಕೆ ಬಿಜೆಪಿ (BJP) ನಾಯಕ ಸಿ.ಟಿ. ರವಿ (C.T Ravi) ತಿರುಗೇಟು ನೀಡಿದ್ದಾರೆ.
ಟ್ವೀಟರ್ ನಲ್ಲಿ ಈ ಕುರಿತಂತೆ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಸಿ.ಟಿ. ರವಿ, ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳೂ ಐದು ಕೆಜಿ ಅಕ್ಕಿ ಕೊಡುತ್ತಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ,ಸಿದ್ದರಾಮಯ್ಯನವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ನೀಡಿ. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿಯ ಮಾರುಕಟ್ಟೆ ದರವನ್ನು ಬಡವರ ಖಾತೆಗೆ ಹಾಕಿ ಎಂದು ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಡವರಿಗೆ ಉಚಿತವಾಗಿ ಕೊಡುವ ಪ್ರಯತ್ನ ನಾವು ಮಾಡುತ್ತೇವೆ. ಆದರೆ ಕೇಂದ್ರ ಸರ್ಕಾರ ಉಚಿತ ಅಕ್ಕಿ ಕೊಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಕೇಂದ್ರ ಎಷ್ಟೇ ಷಡ್ಯಂತ್ರ ಮಾಡಿದ್ರೂ ನಾವು ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
https://twitter.com/CTRavi_BJP/status/1668942568472862720?cxt=HHwWgIDThY6bo6kuAAAA