ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ.
ಆದಾಯ ತೆರಿಗೆ ಪಾವತಿಯಲ್ಲಿ ಅವರು ಕೊಡಗಿಗೆ ನಂಬರ್ ಒನ್ ಆಗಿದ್ದಾರೆ. ‘ಕಿರಿಕ್ ಪಾರ್ಟಿ’ ಮೂಲಕ ಕನ್ನಡ ಚಿತ್ರರಂಗದಿಂದ ಬೆಳ್ಳಿ ತೆರೆಗೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ ನಂತರ ಟಾಲಿವುಡ್, ಬಾಲಿವುಡ್ ಸೇರಿದಂತೆ ಬಹುಭಾಷಾ ಚಿತ್ರಗಳಲ್ಲಿ ನಟಿಸಿದ್ದಾರೆ.
ರಶ್ಮಿಕಾ ಮಂದಣ್ಣ ತಮ್ಮ ಉದ್ಯಮದ ಹಣಕಾಸಿನ ವ್ಯವಹಾರವನ್ನು ರಶ್ಮಿಕಾ ಮಂದಣ್ಣ ಪ್ರೊಡಕ್ಷನ್ಸ್ LLP ಹೆಸರಿನಲ್ಲಿ ಮಾಡುತ್ತಿದ್ದಾರೆ. ಮಡಿಕೇರಿಯಿಂದಲೇ ಅವರು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ. 2022ರ ಆಗಸ್ಟ್ ನಲ್ಲಿ ಈ ಸಂಸ್ಥೆ ಸ್ಥಾಪನೆ ಮಾಡಲಾಗಿದೆ. 2025- 26ನೇ ಆರ್ಥಿಕ ವರ್ಷದಲ್ಲಿ ಕೊಡಗು ಜಿಲ್ಲೆಯಿಂದ ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿ ರಶ್ಮಿಕಾ ಮಂದಣ್ಣ ಗುರುತಿಸಿಕೊಂಡಿದ್ದಾರೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅವರು ನಾಲ್ಕು ಕೋಟಿಗೂ ಅಧಿಕ ತೆರಿಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಈ ಹಣಕಾಸು ವರ್ಷ ಮುಗಿಯುವ ಮಾರ್ಚ್ ವರೆಗೂ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲೇ ಮುಂದುವರೆಯಬಹುದು ಎಂದು ಹೇಳಲಾಗಿದೆ.

