ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಯುವಕನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಯುವಕ ಸುರೇಶ್ ಗುರುವಾರದಿಂದಲೇ ಕಾಣೆಯಾಗಿದ್ದರು. ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗ್ಗೆ ಕಬ್ಬನ್ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸುರೇಶ್ ಶವ ಪತ್ತೆಯಾಗಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಕಬ್ಬನ್ ಪಾರ್ಕ್ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತನ ಜೇಬಿನಲ್ಲಿ ಐಡಿ ಕಾರ್ಡ್ ಲಭಿಸಿದ್ದು, ಆತ ಬೆಂಗಳೂರಿನ ಎಸ್ಪಿ ರೋಡ್ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಐಡಿ ಕಾರ್ಡ್ ಹೊರತುಪಡಿಸಿ ಮೃತನ ಬಳಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಡೆತ್ನೋಟ್ ಲಭಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ನಂತರ ಆತನ ಕುಟುಂಬಕ್ಕೆ ಮಾಹಿತಿ ತಿಳಿಸಿದ ಅಧಿಕಾರಿಗಳು, ಘಟನೆ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

