HomeIndiaಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಹಿನ್ನೆಲೆ ಸಿಯುಇಟಿ -ಪಿಜಿ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ ಸಾಧ್ಯತೆ

ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಹಿನ್ನೆಲೆ ಸಿಯುಇಟಿ -ಪಿಜಿ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆಗೆ ವೇಳಾಪಟ್ಟಿ ಇನ್ನೆರಡು ವಾರದೊಳಗೆ ಪ್ರಕಟವಾಗುವ ನೀರಿಕ್ಷೆ ಇದೆ. ಇದರ ಆಧಾರದ ಮೇಲೆ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ(CUET –UG) ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ(UGC) ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಮೇ 15ರಿಂದ 31ರವರೆಗೆ ಸಿಯುಇಟಿ -ಯುಜಿ ಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ಇತ್ತೀಚೆಗೆ ಹೇಳಿಕೆ ಬಿಡುಗಡೆ ಮಾಡಿತ್ತು. ಇದು ತಾತ್ಕಾಲಿಕ ವೇಳಾಪಟ್ಟಿಯಾಗಿದ್ದು ಲೋಕಸಭೆ ಚುನಾವಣೆ ವೇಳಾಪಟ್ಟಿಯಿಂದ ಪರೀಕ್ಷೆಗೆ ಅಡ್ಡಿಯಾಗುವ ಸಾಧ್ಯತೆ ಇದ್ದರೆ ಬದಲಿ ಪರೀಕ್ಷೆ ದಿನಾಂಕಗಳನ್ನು ಪ್ರಕಟಿಸುವುದಾಗಿ ಜಗದೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular