HomeIndiaಕರ್ನಾಟಕಕ್ಕೆ ಮತ್ತೊಂದು ಆಘಾತ: ತಮಿಳುನಾಡಿಗೆ 9,000 ಕ್ಯೂಸೆಕ್‌ ನೀರು ಹರಿಸುವಂತೆ CWRC ಆದೇಶ

ಕರ್ನಾಟಕಕ್ಕೆ ಮತ್ತೊಂದು ಆಘಾತ: ತಮಿಳುನಾಡಿಗೆ 9,000 ಕ್ಯೂಸೆಕ್‌ ನೀರು ಹರಿಸುವಂತೆ CWRC ಆದೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ CWRC ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್ ನೀಡಿದೆ. ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ಹೊರಡಿಸಿದೆ.

ನವದೆಹಲಿಯಲ್ಲಿ ಇಂದು ನಡೆದ CWRC ಸಭೆಯಲ್ಲಿ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 9000 ಕ್ಯೂಸೆಕ್ ನೀರು ಬಿಡುವಂತೆ ಸೂಚಿಸಿದೆ. ಈ ಹಿಂದೆ ಇದ್ದ 12 ಸಾವಿರ ಬದಲಿಗೆ ಈಗ 9 ಸಾವಿರ ಕ್ಯೂಸೆಕ್‌ ನೀರು ಬಿಡಲು ತಿಳಿಸಲಾಗಿದೆ.

ಮೊದಲ ಬಾರಿಗೆ 3,500 ಕ್ಯೂಸೆಕ್‌ ನೀರು ಬಿಡಲು ಆದೇಶಿಸಲಾಗಿತ್ತು. ಎರಡನೇ ಬಾರಿಗೆ 12 ಸಾವಿರ, ಈಗ ಮೂರನೇ ಬಾರಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಳೆ ಕೊರತೆ, ನೀರಿನ ಅಭಾವದ ನಡುವೆ ಕಾವೇರಿ ನದಿ ನೀರು ವಿಚಾರವಾಗಿ ಕರ್ನಾಟಕ್ಕೆ ಪದೇ ಪದೇ ಸಂಕಷ್ಟ ಎದುರಾಗುತ್ತಿದ್ದು, CWRC ಆದೇಶದ ಬೆನ್ನಲ್ಲೇ ಮತ್ತೆ ಮಂಡ್ಯ, ಮೈಸೂರು ಭಾಗದಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular