BIG BREAKING : ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ ‘CWRC’ ಆದೇಶ

ನವದೆಹಲಿ : ತಮಿಳುನಾಡಿಗೆ ಮತ್ತೆ 3000 ಕ್ಯೂಸೆಕ್ ನೀರು ಹರಿಸುವಂತೆ CWRC (  ಕಾವೇರಿ ನೀರು ನಿಯಂತ್ರಣ ಸಮಿತಿ)  ಆದೇಶ ಹೊರಡಿಸಿದೆ.

18 ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದೆ.

ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ವಿರೋಧಿಸಿ ಕರ್ನಾಟಕ ರೈತ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿದೆ. ಈ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ಎದುರಾಗಿದೆ.

ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆದಿದ್ದು, ವರ್ಚುವಲ್ ಮೂಲಕ ನಡೆಯುತ್ತಿರುವ ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿದ್ದರು. ಸಭೆ ಬಳಿಕ ಸಮಿತಿ ಈ ಆದೇಶ ಹೊರಡಿಸಿದೆ.

ಸಭೆಯಲ್ಲಿ ಕರ್ನಾಟಕ ವಾಸ್ತವ ಸ್ಥಿತಿಯನ್ನು ಸಮಿತಿಗೆ ಮನವರಿಕೆ ಮಾಡಿಕೊಡಲಾಗಿದ್ದು, 25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟೂ ಒಳಹರಿವಿನ ಕೊರತೆ ಶೇ 53.04 ರಷ್ಟು ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ ಎಂದು ಸಮಿತಿಗೆ ಮನವರಿಕೆ ಮಾಡಲಾಗಿತ್ತು.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read