HomeLatest NewsBREAKING: ಸೈಬರ್ ವಂಚಕರ ಜಾಲಕ್ಕೆ ಹೆದರಿದ ಬೆಸ್ಕಾಂ ನೌಕರ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

BREAKING: ಸೈಬರ್ ವಂಚಕರ ಜಾಲಕ್ಕೆ ಹೆದರಿದ ಬೆಸ್ಕಾಂ ನೌಕರ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಬೆಂಗಳೂರು: ಸೈಬರ್ ವಂಚನೆ ಜಾಲಕ್ಕೆ ಸಿಲುಕಿದ ಬೆಸ್ಕಾಂ ಹೊರಗುತ್ತಿಗೆ ನೌಕರರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ.

ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ಬೆಸ್ಕಾಂ ನೌಕರ. ಕುಮಾರ್ ಅವರಿಗೆ ಸಿಬಿಐ ಅಧಿಕಾರಿ ಹೆಸರಲ್ಲಿ ಸೈಬರ್ ವಂಚಕರು ಕರೆ ಮಾಡಿ ಬೆದರಿಕೆ ಹಾಕಿದ್ದರು. ಹಂತ ಹಂತವಾಗಿ 11 ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದರು. ಮನೆ ಕಟ್ಟಲು, ಕೃಷಿ ಕೆಲಸಕ್ಕೆಂದು ಕೂಡಿಟ್ಟಿದ್ದ ಹಣ ಸೈಬರ್ ವಂಚಕರ ಪಾಲಾಗಿದೆ. ಇದರಿಂದ ತೀವ್ರವಾಗಿ ಮನನೊಂದ ಕುಮಾರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲಗೆರೆ ಗ್ರಾಮದ ತನ್ನ ಜಮೀನಿನಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular