HomeKarnatakaಕ್ರಿಪ್ಟೋ ಕರೆನ್ಸಿ ಖರೀದಿಸಿ ಹೆಚ್ಚಿನ ಬೆಲೆಗೆ ಚೈನಾ ವಂಚಕರಿಗೆ ಮಾರಾಟ: ಮತ್ತಿಬ್ಬರು ಸೈಬರ್ ವಂಚಕರು ಅರೆಸ್ಟ್

ಕ್ರಿಪ್ಟೋ ಕರೆನ್ಸಿ ಖರೀದಿಸಿ ಹೆಚ್ಚಿನ ಬೆಲೆಗೆ ಚೈನಾ ವಂಚಕರಿಗೆ ಮಾರಾಟ: ಮತ್ತಿಬ್ಬರು ಸೈಬರ್ ವಂಚಕರು ಅರೆಸ್ಟ್

ಮಂಗಳೂರು: ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರನ್ನು ಸೈಬರ್ ಕಮಾಂಡ್ ಯೂನಿಟ್​​ ಬಂಧಿಸಿದೆ.

ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್​​​ರನ್ನ ಬಂಧಿಸಲಾಗಿದೆ.

ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ‌ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್‌ಗಳು, 18 ಬಿಟ್ ಕಾರ್ಡ್‌ಗಳು, 17 ಬ್ಯಾಂಕ್ ಪಾಸ್‌ಬುಕ್‌ಗಳು, 6 ಚೆಕ್ ಪುಸ್ತಕಗಳು, 1,479.31 USDT-ಕ್ರಿಪ್ಟೋಕರೆನ್ಸಿ 1 ಕಾರನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ ಒಂದು ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತ ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿ ಮಾಡುತ್ತಿದ್ದರು. ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಅವರು ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಬಳಿಕ ಅದೇ ಕ್ರಿಪ್ಟೋ ಕರೆನ್ಸಿಯನ್ನು ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕ್ರಿಪ್ಟೊ ವ್ಯವಹಾರದ ಬದಲಾಗಿ ಆರೋಪಿಗಳು ರೂಪಾಯಿ ರೂಪದಲ್ಲಿ ಹಣವನ್ನು ವಾಪಸ್ ಪಡೆಯುತ್ತಿದ್ದರು. ಇದಕ್ಕಾಗಿ ಮಂಗಳೂರು ನಗರದ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸುತ್ತಿದ್ದರು.

ಸುಮಾರು 70ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಚೀನಾದವರಿಗೆ ನೀಡಲಾಗಿತ್ತು. ನಂತರ ಚೀನಾದ ಸೈಬರ್ ವಂಚಕರು ಆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಆದರೆ ಆ ಹಣ ಸೈಬರ್ ವಂಚನೆಯ ಮೂಲಕ ಪಡೆದದ್ದಾಗಿತ್ತು ಎಂದು ತಿಳಿದುಬಂದಿದೆ. ಚೀನಾದವರ ಸೈಬರ್ ವಂಚನೆ ಬಗ್ಗೆ ಆರೋಪಿಗಳಿಗೆ ತಿಳಿದಿದ್ದರೂ ಸಹ, ಹಣದ ಆಸೆಗೆ ಅವರು ಅವರಿಗೆ ಸಾಥ್​ ನೀಡಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಬಳಸಲಾಗಿದ್ದ 37 ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 88ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular