HomeIndia3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ವಶಕ್ಕೆ: ಓರ್ವ ಅರೆಸ್ಟ್

3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ವಶಕ್ಕೆ: ಓರ್ವ ಅರೆಸ್ಟ್

ಸೈಬರಾಬಾದ್ ಪೊಲೀಸರು ಶನಿವಾರ ನಗರದ ಕಾಟೇದಾನ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಉತ್ಪಾದನಾ ಘಟಕದಿಂದ 3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

2.8 ಲಕ್ಷ ಮೌಲ್ಯದ ಬೆಲ್ಲದ ಪುಡಿ, ಸಿಂಥೆಟಿಕ್ ಫುಡ್ ಕಲರ್ ಮತ್ತು ಪ್ಯಾಕೇಜಿಂಗ್ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಜೇಂದ್ರನಗರ ವಿಶೇಷ ಕಾರ್ಯಾಚರಣೆ ತಂಡವು ಖಚಿತ ಮಾಹಿತಿ ಮೇರೆಗೆ ಮೈಲಾರ್‌ ದೇವಪಲ್ಲಿಯಲ್ಲಿರುವ ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿ ಕಚ್ಚಾ ಸಾಮಗ್ರಿಗಳು ಹಾಗೂ ಪ್ಯಾಕ್ ಮಾಡಿದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಘಟಕವನ್ನು ನಿವಾಸಿ ಮೊಹಮ್ಮದ್ ಅಹ್ಮದ್(34) ನಿರ್ವಹಿಸುತ್ತಿದ್ದು, ಅವರು ‘ರೋಷನ್ ಜಿಂಜರ್ ಗಾರ್ಲಿಕ್ ಪೇಸ್ಟ್’ ಮತ್ತು ‘ಮಾಸ್ ಡೈಮಂಡ್’ ಎಂಬ ಬ್ರಾಂಡ್ ಹೆಸರಿನಲ್ಲಿ ನಕಲಿ ಉತ್ಪನ್ನವನ್ನು ಪೂರೈಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ಪನ್ನವನ್ನು ಮಾರಾಟ ಮಾಡಲು ಅಹ್ಮದ್ ಅವರ ಪರವಾನಗಿ ಎರಡು ವರ್ಷಗಳ ಹಿಂದೆ ಅವಧಿ ಮುಗಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ವಾರಗಳಲ್ಲಿ ನಗರದಲ್ಲಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ನ ಎರಡನೇ ಪ್ರಕರಣ ಇದಾಗಿದೆ. ಫೆಬ್ರವರಿಯಲ್ಲಿ ಬೇಗಂಪೇಟೆ ಪೊಲೀಸರು ರಾಜೇಂದ್ರನಗರದ ಇದೇ ರೀತಿಯ ಉತ್ಪಾದನಾ ಘಟಕದ ಮೇಲೆ ದಾಳಿ ನಡೆಸಿ ಗುಜರಾತ್ ನಿವಾಸಿ ಸೇರಿದಂತೆ ನಾಲ್ವರನ್ನು ಬಂಧಿಸಿ 5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

ಪೊಲೀಸರ ಪ್ರಕಾರ, ಆರೋಪಿಗಳು ಕಲಬೆರಕೆ ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್ ತಯಾರಿಸಿ ನಗರದ ಸಣ್ಣ ಸಾಮಾನ್ಯ ಮಳಿಗೆಗಳ ಮೂಲಕ ಮಾರಾಟ ಮಾಡುತ್ತಿದ್ದರು. ಆರೋಪಿಗಳು ತಮ್ಮ ನಕಲಿ ಉತ್ಪನ್ನವನ್ನು ಮಾರಾಟ ಮಾಡಲು ಮಾರಾಟಗಾರರ ಸರಪಳಿಯನ್ನು ಸ್ಥಾಪಿಸಿರುವುದು ಕಂಡುಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular