HomeIndiaಅರಬ್ಬಿಸಮುದ್ರದಲ್ಲಿ ‘ಬಿಪರ್ ಜಾಯ್’ ಚಂಡಮಾರುತ ಆರ್ಭಟ: ಇಂದು ಗುಜರಾತ್ ಗೆ ಅಪ್ಪಳಿಸಲಿದೆ ಸೈಕ್ಲೋನ್

ಅರಬ್ಬಿಸಮುದ್ರದಲ್ಲಿ ‘ಬಿಪರ್ ಜಾಯ್’ ಚಂಡಮಾರುತ ಆರ್ಭಟ: ಇಂದು ಗುಜರಾತ್ ಗೆ ಅಪ್ಪಳಿಸಲಿದೆ ಸೈಕ್ಲೋನ್

ಅಹಮದಾಬಾದ್: ಅರಬ್ಬಿಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತ ಆರ್ಭಟಿಸುತ್ತಿದ್ದು, ಗುಜರಾತ್ ಸಮುದ್ರ ತೀರಕ್ಕೆ ಅಪ್ಪಳಿಸಲಿದೆ. ಮಧ್ಯಾಹ್ನ 3 ಗಂಟೆಗೆ ಬಿಪರ್ ಜಾಯ್ ಚಂಡಮಾರುತ ತೀರಕ್ಕೆ ಅಪ್ಪಳಿಸಲಿದೆ. ಚಂಡಮಾರುತ ಅಪ್ಪಳಿಸಲಿರುವ ಹಿನ್ನಲೆಯಲ್ಲಿ ಇಂದು 9 ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.

ಭೀತಿ ಸೃಷ್ಟಿಸಿರುವ ಚಂಡಮಾರುತ ಗುಜರಾತ್ ನ ಕಛ್ ಜಿಲ್ಲೆಯ ಜಕಾವು ಬಂದರಿಗೆ ಅಪ್ಪಳಿಸಲಿದ್ದು, ಸಂಭಾವ್ಯ ಅನಾಹುತ ನಿಯಂತ್ರಿಸಲು 75,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಚಂಡಮಾರುತ ಪರಿಣಾಮ ಗುಜರಾತ್ ನ ಹಲವೆಡೆ ಭಾರಿ ಮಳೆಯಾಗಿದೆ. ದ್ವಾರಕ, ಜಾಮ್ ನಗರ, ಪೋರಬಂದರ್, ರಾಜಕೋಟ್ ಜಿಲ್ಲೆಗಳ 9 ತಾಲೂಕುಗಳಲ್ಲಿ ಅತಿಹೆಚ್ಚು ಮಳೆಯಾಗಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ಆರು ಅಡಿ ಎತ್ತರದವರೆಗೂ ಅಲೆ ಏಳಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular