Weather Alert: ಮುಂದಿನ 36 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ `ಬಿಪರ್ಜೋಯ್ ಚಂಡಮಾರುತ’

ನವದೆಹಲಿ: ಮುಂದಿನ 36 ಗಂಟೆಗಳಲ್ಲಿ ಬಿಪರ್ಜೋಯ್ ಚಂಡಮಾರುತವು(Cyclone Biparjoy) ತೀವ್ರಗೊಳ್ಳಲಿದ್ದು, ಮುಂದಿನ ಎರಡು ದಿನಗಳಲ್ಲಿ ಉತ್ತರ-ವಾಯುವ್ಯದತ್ತ ಸಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (India Meteorological Department) ಮಾಹಿತಿ ನೀಡಿದೆ.

ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಜೂನ್ 8 ರಂದು ರಾತ್ರಿ 11:30 ಕ್ಕೆ ಗೋವಾದ ಪಶ್ಚಿಮ-ನೈಋತ್ಯಕ್ಕೆ 840 ಕಿಲೋಮೀಟರ್ ಮತ್ತು ಮುಂಬೈನ ಪಶ್ಚಿಮ-ನೈಋತ್ಯಕ್ಕೆ 870 ಕಿ.ಮೀ ದೂರದಲ್ಲಿರುವ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ ಅತ್ಯಂತ ತೀವ್ರವಾದ ಚಂಡಮಾರುತ ಕಂಡುಬಂದಿದೆ.

ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಲ್ಲಿ 2023 ರ ಜೂನ್ 08 ರ ಭಾರತೀಯ ಕಾಲಮಾನ 23.30 ಗಂಟೆಗೆ ಬಿಪರ್ಜೋಯ್ ಚಂಡಮಾರುತವು ಗೋವಾದ ಪಶ್ಚಿಮ-ನೈಋತ್ಯಕ್ಕೆ ಸುಮಾರು 840 ಕಿ.ಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 870 ಕಿ.ಮೀ ದೂರದಲ್ಲಿದೆ. ಇದು ಮುಂದಿನ 36 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳುತ್ತದೆ ಮತ್ತು ಮುಂದಿನ 2 ದಿನಗಳಲ್ಲಿ ಬಹುತೇಕ ಉತ್ತರ-ವಾಯುವ್ಯದ ಕಡೆಗೆ ಚಲಿಸುತ್ತದೆ ಎಂದು ಅದು ಟ್ವೀಟ್ ಮಾಡಿದೆ.ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಪರಿಣಾಮ ಕರಾವಳಿ ತೀರದ ಪ್ರದೇಶಗಳಿಗೆ ಹೋಗದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸಲಹೆ ನೀಡಿತ್ತು. ಸಮುದ್ರದಲ್ಲಿದ್ದವರಿಗೆ ಕರಾವಳಿಗೆ ಮರಳಲು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read