HomeKarnatakaಬಂಗಾಳಕೊಲ್ಲಿಯಲ್ಲಿ 'ಫೆಂಗಲ್' ಸೈಕ್ಲೋನ್ ಅಬ್ಬರ: ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ‘ಫೆಂಗಲ್’ ಸೈಕ್ಲೋನ್ ಅಬ್ಬರ: ರಾಜ್ಯದಲ್ಲಿ ಇಂದಿನಿಂದ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಇದರ ಪರಿಣಾಮ ಶನಿವಾರ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಅಲ್ಲಲ್ಲಿ ಮಳೆಯಾದ ವರದಿಯಾಗಿದೆ.

ಭಾನುವಾರದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಡಿಸೆಂಬರ್ 2ರಂದು ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular