HomeKarnatakaBREAKING: ರಾಜ್ಯದ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

BREAKING: ರಾಜ್ಯದ 10 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆ ಶೀತಗಾಳಿ ವಾತಾವರಣ ಇದೆ. ಮುನ್ನೆಚ್ಚರಿಕೆ ಪರಿಣಾಮ 10 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಆರೆಂಜ್ ಅಲರ್ಟ್ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋಲಾರ ಜಿಲ್ಲೆಯಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ನಾಳೆ ರಜೆ ನೀಡಲಾಗಿದ್ದು, ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ತಿಳಿಸಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಅಂಗನವಾಡಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಾಳೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಹಿನ್ನಲೆಯಲ್ಲಿ ಹಿನ್ನೆಲೆಯಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಮೈಸೂರು ಜಿಲ್ಲೆಯ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.

ಚಾಮರಾಜನಗರ ಜಿಲ್ಲೆಯ ಶಾಲೆಗಳು ಪಿಯು ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ.

ರಾಮನಗರ, ಚಿಕ್ಕಬಳ್ಳಾಪುರ, ಉಡುಪಿ, ಕೊಡಗು, ಕೋಲಾರ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular