HomeKarnatakaBREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್: ಶಿವಮೊಗ್ಗ ಜಿಲ್ಲೆಯಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ

BREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್: ಶಿವಮೊಗ್ಗ ಜಿಲ್ಲೆಯಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಡಿಸೆಂಬರ್ 3 ರಂದು ಆರೆಂಜ್ ಅಲರ್ಟ್, ಡಿ 4 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮಕ್ಕಳ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 3ರಂದು ಮಂಗಳವಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಈ ರಜೆ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿ ಶಿಶು ಪಾಲನಾ ಕೇಂದ್ರಗಳಿಗೆ ಅನ್ವಯವಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular