HomeKarnatakaಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್: ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್: ರಾಜ್ಯದಲ್ಲಿ 4 ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವೆಂಬರ್ 28 ರಿಂದ ಡಿಸೆಂಬರ್ 1 ರವರೆಗೆ ರಾಜ್ಯದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಹಿಂಗಾರು ಮಳೆ ಕ್ಷೀಣಿಸಿದೆ. ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುತ್ತಿದೆ. ರಾಜ್ಯದಲ್ಲಿ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಅಂಡಮಾನ್, ನಿಕೋಬಾರ್ ದ್ವೀಪಗಳ ಸಮೀಪ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 29ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತ ಪಶ್ಚಿಮ, ವಾಯುವ್ಯಕ್ಕೆ ಚಲಿಸುವ ಸಂಭವ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular