ಬೆಳಗಾವಿ: ಬೇಕರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಡೀ ಅಂಗಡಿಯೇ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಹಾಸನ ಮೂಲದ ವಿರೂಪಾಕ್ಷ ಎಂಬುವವರಿಗೆ ಸೇರಿದ ಬೇಕರಿ ಇದಾಗಿದ್ದು, ಇಂದು ಬೆಳಿಗ್ಗೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಇಡೀ ಬೇಕರಿಗೆ ಬೆಂಕಿ ಹೊತ್ತಿಕೊಂಡಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಬೇಕರಿಯಲ್ಲಿದ್ದ ಆಹಾರ, ವಿವಿಧ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸದ್ಯ ಬೇಕರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
You Might Also Like
TAGGED:ಸಿಲಿಂಡರ್ ಸ್ಫೋಟ