ಬೆಂಗಳೂರು: ನಗರದ ನಾಯಂಡನಹಳ್ಳಿಯ ವಿನಾಯಕ ಲೇಔಟ್ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ರಾಯಚೂರು ಮೂಲದ ಕುಟುಂಬವೊಂದು ಬಾಡಿಗೆ ಮನೆಯಲ್ಲಿ ವಾಸವಿದ್ದು, ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ದಂಪತಿ ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ.
ಘಟನೆಯಲ್ಲಿ ಕರಿಲಿಂಗಪ್ಪ, ಲಕ್ಷಮ್ಮ, ಚೈತ್ರಾ, 9 ವರ್ಷದ ಬಸವ ಹಾಗೂ 3 ವರ್ಷದ ಗೀತಾ ಸೇರಿದಂತೆ ಒಟ್ಟು ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆಯಲ್ಲಿ ಗಾಯಗೊಂಡ ಆರು ಮಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.

