HomeKarnatakaಅಡುಗೆ ಮಾಡುವಾಗಲೇ ಅವಘಡ: ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಾವು

ಅಡುಗೆ ಮಾಡುವಾಗಲೇ ಅವಘಡ: ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದ ಕುವೆಂಪು ಬಡಾವಣೆಯ 9ನೇ ಅಡ್ಡರಸ್ತೆಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿದ್ದಾರೆ.

ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಮಾಮಣಿ(60) ಮೃತಪಟ್ಟ ಮಹಿಳೆ. ಶನಿವಾರ ಬೆಳಗ್ಗೆ ಅಡುಗೆ ಮಾಡಲು ಗ್ಯಾಸ್ ಆನ್ ಮಾಡಿ ಬೆಂಕಿ ಹೊತ್ತಿಸಿದ್ದಾರೆ. ಈ ವೇಳೆ ಸಿಲಿಂಡರ್ ಸ್ಪೋಟಗೊಂಡಿದ್ದು, ಬೆಂಕಿ ಜ್ವಾಲೆ ವ್ಯಾಪಿಸಿ ರಮಾಮಣಿ ಮತ್ತು ಮನೆಯ ಕೆಲಸದ ಮಹಿಳೆ ಲಕ್ಷ್ಮಮ್ಮ ಅವರಿಗೆ ಬೆಂಕಿ ತಗುಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯ ನಿವಾಸಿಗಳು ಬೆಂಕಿಯನ್ನು ನಂದಿಸಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ರಮಾಮಣಿ ಮೃತಪಟ್ಟಿದ್ದಾರೆ. ಲಕ್ಷ್ಮಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular