ಗ್ಯಾಸ್ ಸಿಲಿಂಡರ್ ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಸಮೀಪದ ಮಂಜನಾಡಿ ಗ್ರಾಮದ ಖಂಡಿಕದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಾಯಿ ಹಾಗೂ ಮೂವರು ಮಕ್ಕಳು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುತ್ತಲಿಬ್ ಅವರ ಪತ್ನಿ ಖುಬ್ರಾ, ಮಕ್ಕಳಾದ ಮಹದಿಯಾ, ಮಜಿಯಾ ಮಾಯಿಜಾ ಗಾಯಗೊಂಡವರು ಎಂದು ಹೇಳಲಾಗಿದ್ದು, ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಮಧ್ಯರಾತ್ರಿ ವೇಳೆ ಸ್ಪೋಟದಿಂದಾಗಿ ಮನೆಯ ಮೇಲ್ಚಾವಣಿ ಸಂಪೂರ್ಣ ಹಾರಿ ಹೋಗಿದ್ದು, ಕಿಟಕಿ ಹಾಗೂ ಕೊಠಡಿಗಳು ಸಂಪೂರ್ಣ ಹಾನಿಯಾಗಿದೆ. ಸ್ಥಳೀಯರೊಬ್ಬರು ಜೋರಾಗಿ ಕಿರುಚಾಡಿದ್ದು, ಅಕ್ಕಪಕ್ಕದವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ತಾಯಿ, ಮಕ್ಕಳು ಮಲಗಿದ್ದ ಮಂಚ ಸುಟ್ಟು ಕರಕಲಾಗಿದೆ. ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read