ಕಲಬುರಗಿ: ದೀಪಾವಳಿ ಹಬ್ಬದ ಸಡಗರದಲ್ಲಿದ್ದ ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಪೀಠೋಪಕರಣ, ಚಿನ್ನಾಭರಣ, ನಗದು ಹಣ ಬೆಂಕಿಗಾಹುತಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಡೆದಿದೆ.
ಕುಟುಂಬ ಸದಸ್ಯರು ಮನೆಯೊಳಗಿದ್ದಾಗಲೇ ಸಿಲಿಂದರ್ ಸೋರಿಕೆಯಾದ ವಾಸನೆ ಬಂದಿದೆ. ಸಿಲಿಂಡರ್ ಸೋರಿಕೆಯಾಗುತ್ತಿದೆ ಎಂದು ಮನೆಯಲ್ಲಿದ್ದ ನಾಲ್ವರು ಹೊರಗೋಡಿ ಬಂದಿದ್ದಾರೆ. ಕೆಲ ಸಮಯದಲ್ಲೇ ಸ್ಫೋಟ ಸಂಭವಿಸಿದೆ.
ನೋಡನೋಡುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಯಲ್ಲಿದ್ದ ವಸ್ತಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಸುಲೇಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.