HomeKarnatakaBIG NEWS: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ರಾಜ್ಯ ಸರ್ಕಾರದಿಂದ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ...

BIG NEWS: ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ರಾಜ್ಯ ಸರ್ಕಾರದಿಂದ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟಿರುವ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಹುಬ್ಬಳ್ಳಿಯ ಉಣಕಲ್ ಅಯ್ಯಪ್ಪ ದೇವಾಸ್ಥಾನದ ಬಳಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ನಿಜಲಿಂಗಪ್ಪ ಬೇಪರಿ (58) ಹಾಗೂ ಸಂಜಯ್ ಸವದತ್ತಿ (18) ಮೃತರು. ಇಂದು ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಹುಬ್ಬಳ್ಳಿ-ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಗಾಯಗೊಂಡಿರುವ ಇತರ 7 ಜನರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಕುಟುಂಬದವರ ಜೊತೆ ಚರ್ಚಿಸಿ ಇನ್ನೂ ಹೆಚ್ಚಿನ ಚಿಕಿತ್ಸೆ ನೀದಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular