HomeKarnatakaBIG NEWS: ಕ್ಯಾಂಟರ್ - ಲಾರಿ ಭೀಕರ ಅಪಘಾತ: ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

BIG NEWS: ಕ್ಯಾಂಟರ್ – ಲಾರಿ ಭೀಕರ ಅಪಘಾತ: ಸಿಲಿಂಡರ್ ಸ್ಫೋಟ; ಇಬ್ಬರ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ ಗೆ ಗ್ರ್ಯಾನೈಟ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿಲಿಂಡರ್ ಲೀಕ್ ಆಗಿ ಬೆಂಕಿ ಹೊತ್ತಿ ಉರಿದಿದೆ. ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಘಟನೆಯಲ್ಲಿ ಚಾಲಕ ನರಸಿಂಹ ಮೂರ್ತಿ ಹಾಗೂ ಮಾದಪ್ಪ ಇಬ್ಬರಿಗೂ ಗಂಭೀರವಾದ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular