HomeKarnatakaBIG NEWS: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

BIG NEWS: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಂಗಳೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದೆ.

ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ನೇಪಾಳ ಮೂಲದ ಮದನ್ ಚೌಹಾರ್, ಪತ್ನಿ ಪ್ರೇಮ್ ಜಾಲ, ಮಕ್ಕಳಾದ ಹಿರದ್, ಪ್ರಶಾಂತ್, ಅನಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular