HomeKarnatakaಸಿಲಿಂಡರ್ ಸಮಸ್ಯೆ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

ಸಿಲಿಂಡರ್ ಸಮಸ್ಯೆ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮಗಳು ಸಂಕಷ್ಟಕ್ಕೆ ಸಿಲುಕಿವೆ. ಸಿಲಿಂಡರ್ ಸಿಗದೇ ಹಲವು ಹೋಟೆಲ್‌ಗಳು ಈಗಾಗಲೇ ಬಾಗಿಲು ಮುಚ್ಚಿವೆ. ಇನು ಹಲವು ಹೋಟೆಲ್ ಗಳಲ್ಲಿ ಮೆನು ಕಡಿತಗೊಳಿಸಲಾಗಿದೆ. ಕೆಲ ಹೋಟೆಲ್ ಗಳು ಸೌದೆ ಒಲೆಯಲ್ಲಿ ಅಡುಗೆ ತಯಾರಿಸಿ ಪರದಾಡುವ ಸ್ಥಿತಿ ಬಂದಿದೆ. ಸಿಲಿಂಡರ್ ಬಿಕ್ಕಟ್ಟಿಗೆ ಪರಿಹಾರ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ.

ಹೋಟೆಲ್ ಗಳಿಗೆ ಸಿಲಿಂಡರ್ ಗಳ ಅಭಾವದಿಂದಾಗಿ ಬೆಂಗಳೂರಿನಲ್ಲಿ 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರ ಭವಿಷ್ಯ ಅತಂತ್ರವಾಗಿದ್ದು, ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.

ವಾಣಿಜ್ಯ ​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೋಟೆಲ್​​ ಉದ್ಯಮ ನಷ್ಟ ಅನುಭವಿಸುತ್ತಿವೆ. ಈ ಸ್ಥಿತಿ ಹೀಗೆ ಮುಂದುವರಿದರೆ ಉಳಿದ ಹೋಟೆಲ್ ಗಳು ಬಾಗಿಲು ಮುಚ್ಚುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್ ಮೆಟ್ಟಿಲೇರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳನ್ನು ಪ್ರತಿವಾದಿಯನ್ನಾಗಿಸಿ ಅರ್ಜಿ ಸಲ್ಲಿಸಲಾಗಿದ್ದು, ಹೋಟೆಲ್ ಮುಚ್ಚಿರುವುದರಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಆಗಿದೆ. 40 ಸಾವಿರ ಹೋಟೆಲ್, 6 ಲಕ್ಷ ಕಾರ್ಮಿಕರಿಗೆ ಸಮಸ್ಯೆಯಾಗಿದೆ. ಹೀಗಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಅಸೋಸಿಯೇಷನ್ ಪರ ವಕೀಲ ಕೆ.ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದಾರೆ.

ಹೋಟೆಲ್ ಉದ್ಯಮಕ್ಕೆ 1 ಸಾವಿರ ಸಿಲಿಂಡರ್​ಗಳನ್ನು ಪೂರೈಸುವುದಾಗಿ ಸಚಿವ ಮುನಿಯಪ್ಪ ಹೇಳಿದ್ದರೂ, ಸಚಿವರ ಭರವಸೆ ಬಗ್ಗೆ ಬೆಂಗಳೂರಿನ ಹೋಟೆಲ್ ಮಾಲೀಕರು ಅಸಮಾಧಾನ ಹೊರಹಾಕಿದ್ದಾರೆ. 40 ಸಾವಿರ ಹೋಟೆಲ್​​ಗಳಿಗೆ ಒಂದು ಸಾವಿರ ಸಿಲಿಂಡರ್ ಕೊಡುವ ಬದಲು, ಕೊಡದೆ ಇರುವುದೇ ಒಳ್ಳೆಯದು. ಹೋಟೆಲ್​​ಗಳ ಮಾಲಕರು ಮಾತ್ರವಲ್ಲದೆ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದ ಬಗ್ಗೆಯೂ ಸರ್ಕಾರ ಗಮನ ಹರಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular