ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದಿಂದಾಗಿ ಎಲ್ ಪಿಜಿ ಸಿಲಿಂಡರ್ ಅಭಾವ ಎದುರಾಗಿದೆ. ಬೆಂಗಳೂರಿನಲ್ಲಿ ಸಿಲಿಂಡರ್ ಕೊರತೆಯಿಂದಾಗಿ ಹೋಟೆಲ್ ಉದ್ಯಮಗಳು ಬಾಗಿಲು ಮುಚ್ಚುತ್ತಿವೆ. ಇನ್ನೊಂದೆಡೆ ಗೃಹ ಬಳಕೆ ಸಿಲಿಂಡರ್ ಸಿಗದೇ ಜನಸಾಮಾನ್ಯರು ಪರದಾಡುವಂತಾಗಿದೆ. ಇಂತಹ ಸಂದರ್ಭವನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಖದೀಮರು ಸಿಲಿಂಡರ್ ಕಳ್ಳತನಕ್ಕೆ ಇಳಿದಿದ್ದಾರೆ.
ಬೆಂಗಳೂರಿನಲ್ಲಿ ಗೃಹ ಬಳಕೆಯ ಎರಡು ಸಿಲಿಂಡರ್ ಗಳನ್ನು ಪುಂಡರು ಕದ್ದೊಯ್ದ ಘಟನೆ ನಡೆದಿದೆ. ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, ಅಪಾರ್ಟ್ ಮೆಂಟ್ ಗೆ ನುಗ್ಗಿದ ಇಬ್ಬರು ಖದೀಮರು ಎರಡು ಗೃಹ ಬಳಕೆಯನ್ಸಿಲಿಂಡರ್ ಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ.
ಬೇಗೂರಿನ ಆರ್ ಸಿ ಲೇಔಟ್ ನಲ್ಲಿರುವ ವಿಶ್ವಪ್ರಿಯ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆ ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಬಂದ ಇಬ್ಬರು ಎರಡು ಗೃಹ ಬಳಕೆ ಸಿಲಿಂಡರ್ ಕದ್ದೊಯ್ದಿದ್ದಾರೆ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆ ಮಾಲೀಕರು ಬೇಗೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

