HomeKarnatakaBIG NEWS: ಇಬ್ಬರು ಗ್ಯಾಸ್ ಕಳ್ಳರು ಅರೆಸ್ಟ್: 8 ಸಿಲಿಂಡರ್ ಗಳು ವಶಕ್ಕೆ

BIG NEWS: ಇಬ್ಬರು ಗ್ಯಾಸ್ ಕಳ್ಳರು ಅರೆಸ್ಟ್: 8 ಸಿಲಿಂಡರ್ ಗಳು ವಶಕ್ಕೆ

ರಾಮನಗರ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದಿಂದಾಗಿ ಅದರ ಪರಿಣಾಮ ಭಾರತದ ಮೇಲೆ ಬೀರುತ್ತಿದ್ದು, ದೇಶಾದ್ಯಂತ ಎಲ್ ಪಿಜಿ ಸಿಲಿಂಡರ್ ಅಭಾವ ಸೃಷ್ಟಿಯಾಗಿದೆ. ಸಿಲಿಂಡರ್ ಸಿಗದೇ ಹೋಟೆಲ್ ಉದ್ಯಮಿಗಳು, ಸಾಮಾನ್ಯ ಜನರು ಕೂಡ ಪರದಾಡುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರ ಗುಂಪು ಸಿಲಿಂಡರ್ ಕಳ್ಳತನ ಮಾಡುತ್ತಿದೆ.

ಮನೆಯ ಮುಂದೆ ನಿಲ್ಲಿಸಿದ್ದ ಸಿಲಿಂಡರ್ ಸರಬರಾಜು ವಾಹನದಲ್ಲಿದ್ದ ಸಿಲಿಂದರ್ ಗಳನ್ನು ಕದ್ದು ಕಳ್ಳರು ಪರಾರುಯಾಗಿರುವ ಘಟನೆ ರಾಮನಗರದ ಬಿಡದಿ ವ್ಯಾಪ್ತಿಯಲ್ಲಿ ನಡೆದಿತ್ತು. ಸಿಲಿಂದರ್ ಕದ್ದಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಬಿಡದಿ ಪೊಲೀಸರು ಯಶಸ್ವಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹೇಶ್ ನಾಯಕ್ (19) ಹಾಗೂ ಗೋವಿಂದರಾಜು (20) ಬಂಧಿತ ಆರೋಪಿಗಳು. ಬನ್ನಿಕುಪ್ಪೆ ಗ್ರಾಮದಲ್ಲಿ ಮನೆಮುಂದೆ ನಿಂತಿದ್ದ ಸಿಲಿಂಡರ್ ಸರಬರಾಜು ವಾಹನದಲ್ಲಿದ 8 ಸಿಲಿಂಡರ್ ಗಳ್ನನು ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಬಗ್ಗೆ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯಚರಣೆ ನಡೆಸಿದ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿ 8 ಸಿಲಿಂಡರ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಬೈಕ್ ಕೂಡ ಜಪ್ತಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular