ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಫೆಬ್ರವರಿ 16 ರಂದು 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಅವರ ಮುಂಬರುವ ಸಿನಿಮಾಗಳ ಅಪ್ಡೇಟ್ ಗಳು ಬರಲಿವೆ. ದರ್ಶನ್ ಅಭಿಮಾನಿಗಳು ವಿವಿಧ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ಸಂಭ್ರಮಿಸಲು ಸಿದ್ದರಾಗಿದ್ದಾರೆ. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಇಪ್ಪತ್ತೈದು ವರ್ಷ ಪೂರೈಸಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗಾಗಿ ಫೆಬ್ರವರಿ 17ಕ್ಕೆ ರಜತ ಮಹೋತ್ಸವ ಕಾರ್ಯಕ್ರಮ ಆಯೋಜಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಸಂಜೆ ಐದು ಗಂಟೆಗೆ ಕಾರ್ಯಕ್ರಮ ಪ್ರಾರಂಭಿಸಲಿದ್ದು, ಬಿಜೆಪಿ ನಾಯಕ ಸಚ್ಚಿದಾನಂದ ಅವರು ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾಗಿದ್ದ ದರ್ಶನ್ ಅವರ ‘ಕಾಟೇರ’ ಭರ್ಜರಿ ಯಶಸ್ಸು ಕಂಡಿದ್ದು, ಅವರ ಮುಂದಿನ ಚಿತ್ರ ‘ರಾಜ ವೀರ ಮದಕರಿ ನಾಯಕ’ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿದೆ.


 
			 
		 
		 
		 
		 Loading ...
 Loading ... 
		 
		 
		