ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲಾಗಿದೆ.
ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗಕ್ಕಾಗಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://kvcdcl.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ WWW.kaushalkar.com ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ದಾವಣಗೆರೆ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ವೈಯಕ್ತಿಕ ಸಹಾಯಧನ, ಸಾಲ ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಅರ್ಜಿಗಳನ್ನು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ ಅಥವಾ ದೂ.ಸಂ: 08192-230934, 080-22374848, 7899899039 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

