HomeLatest Newsಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಆ.20 ರಂದು ಡಿ.ದೇವರಾಜ ಅರಸು ಜನ್ಮ ದಿನಾಚರಣೆ : ಸಕಲ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಡಿ.ದೇವರಾಜ ಅರಸುರವರ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20 ರಂದು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಡಿ.ದೇವರಾಜ ಅರುಸುರವರ ಜನ್ಮ ದಿನಾಚರಣೆ ಸಮಾರಂಭದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಆಹ್ವಾನಿಸಲು ಸೂಚಿಸಿದ ಅವರು ಆ.20 ರಂದು ಕುವೆಂಪು ರಂಗಮAದಿರದಲ್ಲಿ ಜಯಂತಿ ಆಚರಣೆಗೆ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದರು. ನಗರದ ಮುಖ್ಯ ಭಾಗಗಳಲ್ಲಿ ಪಾಲಿಕೆ ವತಿಯಿಂದ ಫ್ಲೆಕ್ಸ್ಗಳನ್ನು ಅಳವಡಿಸಲು, ತೋಟಗಾರಿಕೆ ಮತ್ತು ಪಾಲಿಕೆಯವರು ವೇದಿಕೆ ಅಲಂಕಾರ ಕೈಗೊಳ್ಳುವಂತೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಲಘು ಉಪಹಾರದ ವ್ಯವಸ್ಥೆ ಮಾಡುವಂತೆ ಸೂಚಿಸಿದ ಅವರು ಮುಖಂಡರು ಉಲ್ಲೇಖಿಸಿದ ಉಪನ್ಯಾಸಕರಿಂದ ಅರಸುವರವ ಕುರಿತು ಉಪನ್ಯಾಸ ನೀಡಲು ವ್ಯವಸ್ಥೆ ಮಾಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಲಿತ ಸಂಘಟನೆ ಮತ್ತು ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಎಲ್ಲ ಇಲಾಖೆಗಳು ಮತ್ತು ವಿವಿಧ ಸಂಘ ಸಂಸ್ಥೆಳು, ಸಂಘಟನೆಗಳ ಸಹಯೋಗ ಮತ್ತು ಸಮನ್ವಯತೆಯಿಂದ ಅರಸುರವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಮನವಿ ಮಾಡಿ, ದೇವರಾಜು ಅರಸು ಪ್ರಶಸ್ತಿ ಪುರಸ್ಕಾರ ನೀಡುವುದನ್ನು ನಿಲ್ಲಿಸಿ ಎರಡು ವರ್ಷಗಳಾಯಿತು. ಪುನಃ ಈ ಪ್ರಶಸ್ತಿ ನೀಡಬೇಕೆಂದು ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಅರಸುರವರ ಕುರಿತಾದ ಕಿರು ಪುಸ್ತಕಗಳನ್ನು ವಿತರಿಸುವಂತೆ ಮನವಿ ಮಾಡಿದರು.

ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ಅಧ್ಯಕ್ಷರಾದ ವಿ ರಾಜು ಮಾತನಾಡಿ, ದೇವರಾಜ ಅರಸು ಭವನದ ನಿರ್ಮಾಣ ಪೂರ್ಣಗೊಳ್ಳಲು ಅಗತ್ಯವಾದ ಅನುದಾನ ತಂದು ಕಾಮಗಾರಿಯನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು. ಹಾಗೂ ಸಮುದಾಯ ಭವನವನ್ನು ಇಲಾಖೆಯ ಆಡಳಿತ ಕಚೇರಿ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳದೇ, ಭವನದ ನಿರ್ಮಾಣದ ಉದ್ದೇಶದ ಆಶಯಗಳನ್ವಯ ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಶಾಲಾ-ಕಾಲೇಜು ಮಟ್ಟದಲ್ಲಿ ಅರಸು ರವರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಜಯಂತಿ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ನೀಡುವಂತೆ ತಿಳಿಸಿದರು.

ಜಿಲ್ಲೆಯ ಪ್ರತಿ ತಾಲ್ಲೂಕುಗಳಲ್ಲಿ ಹಿಂದುಳಿದ ವರ್ಗಗಳಿಗಾಗಿ ಸೇವೆ ಸಲ್ಲಿಸಿದ ಓರ್ವರನ್ನು ಗುರುತಿಸಿ ಜಯಂತಿಯAದು ಸನ್ಮಾನಿಸಲಾಗುವುದು ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದರು.

ದೇವರಾಜ ಅರಸು ಸಮುದಾಯ ಭವನ ಕಟ್ಟಡ ನಿರ್ಮಾಣದ ಅಂದಾಜು ಮೊತ್ತಕ್ಕಿಂತ ಹೆಚ್ಚಾದ ಕಾರಣ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದೀಗ ಕಾಮಗಾರಿ ಪೂರ್ಣಗೊಳ್ಳಲು ಅವಶ್ಯಕತೆ ಇರುವ ರೂ. 1.7 ಕೋಟಿ ಮೊತ್ತದ ಅಂದಾಜು ಪಟ್ಟಿ ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಿ ಅನುದಾನ ನೀಡುವಂತೆ ಜನಪ್ರತಿನಿಧಗಳು ಮತ್ತು ಅಧಿಕಾರಿಗಳಿಗೆ ಮನವಿ ಮಾಡಲಾಗುವುದು. ಅನುದಾನ ಬಿಡುಗಡೆಯಾದ ತಕ್ಷಣ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದ ಅವರು ಎಲ್ಲರೂ ಸೇರಿ ಜಯಂತಿಯನ್ನು ಯಶಸ್ವಿಯಾಗಿಸೋಣ. ಎಲ್ಲ ಸರ್ಕಾರಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕೆಂದು ತಿಳಿಸಿದರು. .

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೋಭಾ, ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರಾದ ಎಸ್ ಪಿ.ಶೇಷಾದ್ರಿ, ವೆಂಕಟೇಶ್, ಇತರೆ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular