ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-01 ಮತ್ತು 2ಎ ರಲ್ಲಿ ಬರುವ (ಮರಾಠ ಲಿಂಗಾಯತ ವಿಶ್ವ್ ಕರ್ಮ್, ಉಪ್ಪಾರ, ಅಂಬಿಗ, ಅಲೇಮಾರಿ, ಒಕ್ಕಲಿಗ, ಮಡಿವಾಳ, ಸವಿತಾ ಸಮಾಜ ಹೊರತುಪಡಿಸಿ) ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ.
ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಹು-ಧಾ ಪೂರ್ವ, ಹು-ಧಾ ಸೆಂಟ್ರಲ್‍ಗಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.3 ಲಕ್ಷಗಳ ಒಳಗಿರಬೇಕು ಹಾಗೂ ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು.
ಹಿಂದುಳಿದ ವರ್ಗಗಳ ಸಮುದಾಯದ ಅರ್ಜಿದಾರರು ಮಾರ್ಚ 04,2026 ರೊಳಗಾಗಿ ಸೇವಾಸಿಂಧು ಪೆÇೀರ್ಟಲ್ ಗ್ರಾಮಒನ್, ಕರ್ನಾಟಕ ಒನ್‍ಗಳ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://dbcdc.karnataka.gov.in ಅಥವಾ ನಿಗಮದ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 0836-2957829 ಗೆ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

