HomeKarnatakaBIG NEWS : ಬೆಳಗಾವಿಯಲ್ಲಿ ಡಿ. 26, ರಂದು 'ಗಾಂಧಿ ಭಾರತ' ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ...

BIG NEWS : ಬೆಳಗಾವಿಯಲ್ಲಿ ಡಿ. 26, ರಂದು ‘ಗಾಂಧಿ ಭಾರತ’ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಚಾಲನೆ.!

ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರಸಕ್ತ ವರ್ಷದುದ್ದಕ್ಕೂ ಆಯೋಜಿಸಿರುವ ಗಾಂಧಿ ಭಾರತ ಕಾರ್ಯಕ್ರಮದ ಲಾಂಛನವನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅನಾವರಣಗೊಳಿಸಲಾಯಿತು.

ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26 ಹಾಗೂ 27 ರಂದು ಗಾಂಧಿ ಭಾರತ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಮುಂಬರುವ 2025ರ ಅಕ್ಟೋಬರ್ 2ರ ವರೆಗೆ ರಾಜ್ಯದಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಗಾಂಧೀಜಿಯವರ ಬದುಕು, ಹೋರಾಟ, ಸ್ವಾತಂತ್ರ್ಯ ಚಳುವಳಿ ಕುರಿತು ಮಕ್ಕಳು, ಯುವಜನರು ಸೇರಿದಂತೆ ಎಲ್ಲಾ ವಯೋಮಾನದ ಜನರಲ್ಲಿ ದೇಶಾಭಿಮಾನ, ಸತ್ಯ, ಅಹಿಂಸೆ, ಆರ್ಥಿಕ ಚಿಂತನೆಗಳು, ಸ್ವರಾಜ್, ಅಸ್ಪೃಶ್ಯತೆ ನಿವಾರಣೆ ಮತ್ತಿತರ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಕಾರ್ಯಕ್ರಮಗಳನ್ನು ಸರ್ಕಾರ ಆಯೋಜಿಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular