BREAKING: ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿರುದ್ಧ ಅತ್ಯಾಚಾರ, ಬ್ಲ್ಯಾಕ್ ಮೇಲ್ ಆರೋಪ: ಸಂತ್ರಸ್ತೆಯಿಂದ ದೂರು ದಾಖಲು

ಬೆಂಗಳೂರು: ಬೆಂಗಳೂರಿನ ಡಿ.ಜೆ.ಹಳ್ಳಿ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ವಿರುದ್ಧ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ.

ಸಂತ್ರಸ್ತ ಯುವತಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಇನ್ಸ್ ಪೆಕ್ಟರ್ ಸುನೀಲ್ ಕುಮಾರ್ ತನನ್ನು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಒಂದು ವರ್ಷದಲ್ಲಿ ಮೂರು ಬಾರಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಕೊಡಿಸುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಲ್ಪಸಂಖ್ಯಾತ ಮಹಿಳೆ ಮೇಲೆ ಅತ್ಯಾಚಾರವೆಸಗಿ ವಂಚಿಸಿದ್ದು, ಈಗ ಖಾಸಗಿ ವಿಡಿಯೋ, ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅಲ್ಲದೇ ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಇನ್ಸಪೆಕ್ಟರ್ ಕಾಟಕ್ಕೆ ನೊಂದ ಸಂತ್ರಸ್ತೆ ಪೊಲೀಸ್ ಮಹಾನಿರ್ದೇಶಕ ಕಚೇರಿಗೆ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read