HomeKarnatakaBIG NEWS: ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು; ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕೆಂದು ಟಿವಿಕೆ ಜತೆ...

BIG NEWS: ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು; ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕೆಂದು ಟಿವಿಕೆ ಜತೆ ಮೈತ್ರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡಿನಲ್ಲಿ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಜೊತೆ ಕಾಂಗ್ರೆಸ್ ಮೈತ್ರಿ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಟಿವಿಕೆ ಜೊತೆ ಕೈಜೋಡಿಸಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ತಮಿಳುನಾಡಿನ ಹಿತ, ಜಾತ್ಯಾತೀತ ತತ್ವ ಉಳಿಯಲು ತೀರ್ಮಾನ ಕೈಗೊಂಡಿದ್ದೇವೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು. ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕು ಎಂದು ಈ ತೀರ್ಮಾನ ಮಾಡಲಾಗಿದೆ. ಎಐಡಿಎಂಕೆ, ಬಿಜೆಪಿಯವರು ಎಷ್ಟೇ ಒತ್ತಡ ಹಾಕಿದರು ಟಿವಿಕೆಯವರು ಮೈತ್ರಿ ಮಾಡಿಕೊಳ್ಳಲಿಲ್ಲ. ಜಾತ್ಯಾತೀತ ಶಕ್ತಿ ಉಳಿಯಲು, ತಮಿಳುನಾಡಿನ ಹಿತಕ್ಕಾಗಿ ನಮ್ಮ ಪಕ್ಷ ಮೈತ್ರಿ ತೀರ್ಮಾನ ಮಾಡಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಐಪಿಎಲ್ ಸ್ಥಳಾಂತರ ವಿಚರಾವಗಿ, ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular