7 ಸಾವಿರ ರಸ್ತೆ ಗುಂಡಿ ಮುಚ್ಚಿದ್ದು, 5 ಸಾವಿರ ಗುಂಡಿ ಬಾಕಿ ಇವೆ: ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಸಿಲ್ಲ ಯಾಕೆ? ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು: ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ ಎಂದು ತಿಳಿಸಿದರು.

ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ. ಅವರುಗಳು ಮೊದಲು ತಮ್ಮ‌ಪಾಲಿನ ಕೆಲಸ ಮಾಡಲಿ. ಅನಂತರ ರಾಜಕೀಯ ಮಾಡಲಿ. ನಾವು ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಾವು ರಾಜಕೀಯ ಮಾಡುವುದು ಬಿಟ್ಟು ಜನರ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read