HomeLatest NewsBIG NEWS: ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ:...

BIG NEWS: ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಕೋಮು ಭಾವನೆ ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ವಿಚಾರವಾಗಿ, ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನಡಿದ್ದಾರೆ. ಹೊರ ರಾಜ್ಯಕ್ಕೆ ಹೋಗಿದ್ದ ಹಿನ್ನೆಲೆಯಲ್ಲಿ ನನಗೆ ಈ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನನಗೆ ಸಂಪೂರ್ಣ ಮಾಹಿತಿ ಸಿಗದೇ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟು ಬೇರೆ ಕೆಲಸ ಏನಿದೆ? ಅವರು ದೆಹಲಿಗೆ ಹೋಗಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು, ನರೇಗಾ ಅನುದಾನ, ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳಿಗೆ ಅನುಮತಿ ತೆಗೆದುಕೊಂಡು ಬರಲಿ ಎಂದು ಸವಾಲೆಸೆದರು.

For Latest News Updates, Join Our Whatsapp Community🚩
RELATED ARTICLES

Most Popular