BIG NEWS: ಬಿಜೆಪಿಯವರಿಗೆ ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲ: ಡಿಸಿಎಂ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ನಾಯಕರಿಗೆ ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಅಧಿವೇಶನ ನಾಲ್ಕು ದಿನ ಬಾಕಿ ಇದ್ದು, ಉತ್ತರ ಕರ್ನಾಟಕದ ವಿಚಾರ ಚರ್ಚೆ ಬಗ್ಗೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣ ಹೊರತಾಗಿ ಬೇರೆ ವಿಚಾರ ಬೇಕಿಲ್ಲ. ಅವರ ಪಕ್ಷದಲ್ಲಿ ಒಗ್ಗಟ್ಟಿಲ್ಲ ಎಂದು ತಿಳಿಸಿದರು.

ಉತ್ತರ ಕರ್ನಾಟಕದ ನೀರಾವರಿ ವಿಚಾರವಾಗಿ ಚರ್ಚೆ ಮಾಡಲು ನಾನು ಸಿದ್ಧ. ನೀರಾವರಿ ಜತೆಗೆ ಬೇರೆ ವಿಚಾರಗಳೂ ಚರ್ಚೆಯಾಗಲಿ ಎಂದರು.

ಮಹದಾಯಿ ಯೋಜನೆ ವಿಚಾರವಾಗಿ ಇತ್ತೀಚೆಗಷ್ಟೇ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿದ್ದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನೂ ಭೇಟಿ ಮಾಡಿ ಚರ್ಚೆ ಮಾಡಿದೆ. ಅವರು ಕೂಡ ಅರಣ್ಯ ಸಚಿವರ ಜತೆ ಚರ್ಚೆ ಮಾಡಿರುವ ಬಗ್ಗೆ ತಿಳಿಸಿದರು. ಮಹದಾಯಿ ಯೋಜನೆ ಕಾಮಗಾರಿಗಳ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕೇಂದ್ರದ ಅನುಮತಿ ದೊರೆತ ತಕ್ಷಣ ಕೆಲಸ ಆರಂಭವಾಗುತ್ತದೆ. ಮೇಕೆದಾಟು ಯೋಜನೆ ವಿಚಾರವಾಗಿ ಸಂಭ್ರಮಾಚರಣೆ ಮಾಡಿದ್ದು ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಷಿ. ಹೀಗಾಗಿ ಅವರೇ ನೇತೃತ್ವ ವಹಿಸಿ ಈ ಯೋಜನೆಗೆ ಅನುಮತಿ ಕೊಡಿಸಬೇಕು. ಅವರು ಅರಣ್ಯ ಇಲಾಖೆ ಅನುಮತಿ ಕೊಡಿಸಲಿ ನಾವು ಕೆಲಸ ಆರಂಭಿಸುತ್ತೇವೆ. ಅನುಮತಿ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read