ಬೆಂಗಳೂರು: ಎಂಎಲ್ ಸಿ ಸಿ.ಟಿ.ರವಿ ಸಂಸ್ಕೃತಿ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ವಿಧಾಅನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ಸಿ.ಟಿ.ರವಿ ವಿರುದ್ಧ ಎಫ್ ಐ ಆರ್ ದಾಖಲು ವಿಚಾರವಾಗಿ, ಈ ವಿಚಾರ ನನಗೆ ಗೊತ್ತಿಲ್ಲ. ಅದರ ಬಗ್ಗೆ ತಿಳಿದುಕೊಳ್ಳುತ್ತೇನೆ. ಆದರೆ ಸಿ.ಟಿ.ರವಿ ಸಂಸ್ಕೃತಿ ಬಗ್ಗೆ ರಾಜ್ಯದ ಜನತೆ ಗೊತ್ತಿದೆ ಎಂದರು.
ಇದೇ ವೇಳೆ ಗ್ರೇಟರ್ ಬೆಂಗಳೂರು ಚುನಾವಣೆ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಿದರೆ ತಪ್ಪೇನು? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬ್ಯಾಲೆಟ್ ಪೇಪರ್ ನ್ನು ಚುನಾವಣೆಯಲ್ಲಿ ಬಳಸಬಹುದು ಎಂದು ಕಾನೂನು ಮಾಡಿದ್ದರು. ಎಲೆಕ್ಷನ್ ಕಮಿಷನ್ ನಲ್ಲಿಯೂ ಬ್ಯಾಲೆಟ್ ಪೇಪರ್ ನಲ್ಲಿ ಚುನಾವಣೆ ಮಾಡಲು ಅವಕಾಶವಿದೆ ಎಂದು ಹೇಳಿದರು.